Wednesday, March 22, 2023
spot_img
- Advertisement -spot_img

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಬೆಳಗಾವಿ: ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಕಟ್ಟಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ 80 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿದರು. ಈಗಾಗಲೇ ರಾಘವೇಂದ್ರ ಸಂಸದರಾಗಿದ್ದು, ವಿಜಯೇಂದ್ರ ಕೂಡ ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ವಿಜಯೇಂದ್ರ ಎಲ್ಲವನ್ನು ಸರಿದೂಗಿಸಿಕೊಂಡು ಹೋಗುತ್ತಾರೆ. ನಾನೇನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ವಾಜಪೇಯಿ ಪಿಎಂ ಆಗಿದ್ದಾಗ ನನ್ನನ್ನು ಆಹ್ವಾನಿಸಿದ್ದರು. ಪಕ್ಷ ಈಗ ನನಗೆ ಎಲ್ಲ ಸ್ಥಾನಮಾನ, ಅಧಿಕಾರ, ಗೌರವ ನೀಡಿದೆ. ಅದರ ಋಣ ತೀರಿಸುವ ಜವಾಬ್ದಾರಿ ನನ್ನದು, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದರು.

ವಿಜಯೇಂದ್ರ ಜೊತೆಗೆ ನಾನು ಓಡಾಡುತ್ತಿದ್ದೇನೆ, ಆದರೆ ನಾನೇನು ರಾಜಕೀಯ ನಿವೃತ್ತಿ ಪಡೆದಿಲ್ಲ. ಈ ಚುನಾವಣೆಯಲ್ಲಿ ಓಡಾಡುತ್ತೇನೆ. ದೇವರು ಶಕ್ತಿ ನೀಡಿದರೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಅಭಿಪ್ರಾಯ ಪಟ್ಟರು.ಅಧಿಕಾರ ರಚಿಸುವ ಪಕ್ಷಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಬಹಳಷ್ಟು ಇರುತ್ತದೆ. ನಾವೆಲ್ಲರೂ ಕುಳಿತು ಚರ್ಚೆ ಮಾಡಿ ನಂತರವೇ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.

Related Articles

- Advertisement -

Latest Articles