ಮಂಡ್ಯ : ಮುಂದಿನ ಬಾರಿ ನಾವು ಅಧಿಕಾರಕ್ಕೆ ಬರೋದು ಖಚಿತ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಎಲ್ಲೆಡೆ ಬಿಜೆಪಿ ಅಲೆಯಿದ್ದು, ಹಳೆ ಮೈಸೂರು , ಮಂಡ್ಯ ಭಾಗದಲ್ಲಿ ಜೆಡಿಎಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದರು.
ಕಳೆದ 30 ವರ್ಷಗಳಿಂದ ಕಾಂಗ್ರೆಸ್, ಜೆಡಿಎಸ್ ಏನೂ ಮಾಡಿಲ್ಲ, ಸಿದ್ದರಾಮಯ್ಯ ಬರೀ ಆ ಭಾಗ್ಯ, ಈ ಭಾಗ್ಯ ಎನ್ನುತ್ತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟಿತು. ಅನ್ನ ಭಾಗ್ಯದಲ್ಲೂ ಕನ್ನ ಹಾಕುವ ಕೆಲಸ ಮಾಡಿತು ಎಂದರು. ಮಂಡ್ಯ ಜಿಲ್ಲೆಗೆ ನೀರಾವರಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಬಿಜೆಪಿ ಸರ್ಕಾರ . ಬೆಂಗಳೂರು – ಮೈಸೂರು ಸೂಪರ್ ಫಾಸ್ಟ್ ಹೆದ್ದಾರಿ ನಿರ್ಮಿಸಿದ್ದು ಬಿಜೆಪಿ ಸರ್ಕಾರ ನಮ್ಮ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತದೆ ಎಂದರು.
ರಾಜ್ಯದಲ್ಲಿ ಇಂದು ಎಲ್ಲೆಡೆ ಬಿಜೆಪಿ ಅಲೆಯಿದೆ, ಮುಂದಿನ ಎಲೆಕ್ಷನ್ ನಲ್ಲಿ ಬಿಜೆಪಿ ಸುನಾಮಿ ಏಳಲಿದೆ ಇಂದು ರಾಜ್ಯಕ್ಕೆ ಅಮಿತ್ ಶಾ ಎಂಟ್ರಿಯಿಂದಾಗಿ ಸುನಾಮಿ ಅಲೆಯಂತೆ ಬಿಜೆಪಿ ಪರ ಅಲೆ ಏಳಲಿದೆ.
2023 ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ಪ್ರಧಾನಿ ಮೋದಿ ಸಾಕಷ್ಟು ಜನಪರ ಕಾರ್ಯಕ್ರಮ ನೀಡಿದ್ದಾರೆ. ಅಲ್ಲದೇ, ಇಡೀ ವಿಶ್ವವೇ ಬೆರಗುಗಣ್ಣಿನಿಂದ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇದಕ್ಕೆ ಮೋದಿಯವರ ಸಮರ್ಥ ನಾಯಕತ್ವ ಕಾರಣ’ ಎಂದು ಹೇಳಿದರು.‘ಮೋದಿಯವರು ಉತ್ತಮ ಆಡಳಿತದ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. ಎಂದರು.