Thursday, June 8, 2023
spot_img
- Advertisement -spot_img

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ , ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದೇವೆ. ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​ ಇಲ್ಲಸಲ್ಲದ ಆರೋಪ ಮಾಡ್ತಿದೆ. ಕಾಂಗ್ರೆಸ್ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ. ಕಾಂಗ್ರೆಸ್ ಪಕ್ಷ 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಒಳಮೀಸಲಾತಿ ವಿಚಾರದಲ್ಲಿ ಬಂಜಾರ ಸಮುದಾಯ ತಪ್ಪು ಗ್ರಹಿಕೆಯಿಂದ ಕಲ್ಲುತೂರಾಟ ಪ್ರಕರಣ ನಡೆದಿದೆ. ಬಂಜಾರ ಸಮುದಾಯವನ್ನು ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ.

ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿದಷ್ಟೇ ಬೆಂಬಲ ಈಗಲೂ ಸಿಗಲಿದೆ. ಮೋದಿ, ಅಮಿತ್ ಶಾ ಇನ್ನೂ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ ಎಂದರು.

Related Articles

- Advertisement -spot_img

Latest Articles