ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ, 80ನೇ ವಸಂತಕ್ಕೆ ಕಾಲಿಟ್ಟಿರುವ ಬಿಎಸ್ ಯಡಿಯೂರಪ್ಪನವರಿಗೆ ವಿವಿಧ ಸಂಘಟನೆಯ ಮುಖಂಡರು ಅಭಿಮಾನಿಗಳು , ರಾಜಕೀಯ ಗಣ್ಯರು , ಸಿನೆಮಾ ಗಣ್ಯರು ಶುಭಾಶಯ ಕೋರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್, ಸಚಿವ ಬಿಸಿ ಪಾಟೀಲ್, ಸಚಿವ ಪ್ರಹ್ಲಾದ್ ಜೋಷಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಹುಟ್ಟು ಹಬ್ಬದ ಹಿನ್ನೆಲೆ ಬಿಎಸ್ ಯಡಿಯೂರಪ್ಪನವರು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಭದ್ರಾವತಿ ತಾಲೂಕಿನ ಕಾರ್ಯಕರ್ತರು ತಂದಿದ್ದ 80 ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಸಚಿವ ಬಿ.ಸಿ.ಪಾಟೀಲ್ ಶುಭ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಎಸ್ ವೈ ಮನೆಗೆ ಭೇಟಿ ನೀಡಿ ಜನುಮ ದಿನದ ಶುಭಾಶಯ ಕೋರಿದರು. ಶಿವಮೊಗ್ಗ ಏರ್ಪೋರ್ಟ್ ನ್ನು ಪ್ರಧಾನಿ ಮೋದಿಯವರು ಉದ್ಘಾಟಿಸುತ್ತಿದ್ದಾರೆ. ಈ ದಿನ ನನ್ನ ಜೀವನದಲ್ಲಿ ಮರೆಯಲಾಗದ ದಿನ ಹಾಗೂ ಕ್ಷಣ. ಪ್ರಧಾನಿ ಮೋದಿಯವರೇ ನನ್ನ ಜನ್ಮದಿನದಂದು ವಿಮಾನ ನಿಲ್ದಾಣ ಉದ್ಘಾಟಿಸ್ತಿರೋದು ಸಂತೋಷದ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಎಲ್ಲರೂ ಬಂದು ಭಾಗವಹಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ವಿನಂತಿಸಿದರು.ಇನ್ನೂ ಇದೇ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ ವಿಜಯೇಂದ್ರ ಭಾಗವಹಿಸಿದ್ದರು.