ಬೆಂಗಳೂರು: ಮೈಸೂರಿನ ವರುಣಾ ಕ್ಷೇತ್ರದಿಂದ ನನ್ನ ಪುತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಶಿಕಾರಿಪುರ ಕ್ಷೇತ್ರದಿಂದಲೇ ತಮ್ಮ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ
ವರುಣಾದಲ್ಲಿ ವಿಜಯೇಂದ್ರ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಹೈಕಮಾಂಡ್ ನಾಯಕರಿಗೂ ವಿಜಯೇಂದ್ರಗೆ ಶಿಕಾರಿಪುರದಿಂದಲೇ ಟಿಕೆಟ್ ನೀಡಿ ಅಂತ ತಿಳಿಸುತ್ತೇನೆ ಎಂದರು.
ಈಗಾಗಲೇ ಶಿಕಾರಿಪುರದಲ್ಲೇ ಚುನಾವಣೆಗೆ ನಿಲ್ಲುವಂತೆ ನಾನು ವಿಜಯೇಂದ್ರಗೆ ಹೇಳಿದ್ದೇನೆ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ. ಹೈಕಮಾಂಡ್ ನಾಯಕರಿಗೂ ವಿಜಯೇಂದ್ರಗೆ ಶಿಕಾರಿಪುರದಿಂದಲೇ ಟಿಕೆಟ್ ನೀಡಿ ಅಂತ ತಿಳಿಸುತ್ತೇನೆ ಎಂದರು.
ವರುಣಾಗೆ ವಿಜಯೇಂದ್ರ ಹೋಗಲ್ಲ, ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ಬಿಜೆಪಿಗೆ ಸ್ವಂತ ಬಲವಿದೆ. ಭಾರತೀಯ ಜನತಾ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವೆ” ಎಂದು ವಿಜಯೇಂದ್ರ ಹೇಳಿದ್ದರು. ಈ ಹೇಳಿಕೆಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಿದ್ದು, ವಿಜಯೇಂದ್ರ ಹೇಳಿಕೆ ಸರಿಯಾಗಿದೆ. ಅವರು ಶಿಕಾರಿಪುರದಿಂದ ಸ್ಪರ್ಧಿಸಬೇಕು ಎಂದು ಹೇಳುತ್ತಿದ್ದೇನೆ. ಈ ಕುರಿತು ಪಕ್ಷದ ವರಿಷ್ಠರಿಗೆ ತಿಳಿಸುವೆ” ಎಂದು ಹೇಳಿದ್ದಾರೆ.