ಶಿವಮೊಗ್ಗ : ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ವಿಶ್ವಾಸ ನನಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮದವರ ಜೊತೆ ಮಾತನಾಡಿ, ರಾಜ್ಯದಲ್ಲಿ ಸಮೀಕ್ಷೆಗಳು ಏನೇ ಹೇಳಲಿ, 115 ಸ್ಥಾನ ಪಡೆದು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮತದಾನದ ನಂತರ ರಾಜ್ಯದ ಉದ್ದಗಲಕ್ಕೂ ನಮ್ಮ ಎಲ್ಲಾ ಮುಖಂಡರೊಂದಿಗೆ ನಾನು ಮಾತನಾಡಿದ್ದೇನೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಆ ಆಧಾರದ ಮೇಲೆ ಸರ್ಕಾರ ರಚನೆ ಮಾಡುವ ವಿಶ್ವಾಸ ಇದೆ ಎಂದರು.
ನಿಶ್ಚಿತವಾಗಿ 115ಕ್ಕೂ ಹೆಚ್ಚು ಸ್ಥಾನ ಪಡೆದು ಸ್ವಂತ ಶಕ್ತಿ ಮೇಲೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಲಿ ಅದಕ್ಕೆ ನಾನು ಟೀಕೆ ಮಾಡುವುದಿಲ್ಲ. ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಕೊಟ್ಟಿರುವುದು ನಿಜ. ಒಂದೆರೆಡು ಸಮೀಕ್ಷೆಗಳು ನಮ್ಮ ಪರವಾಗಿಯೂ ಇವೆ ಎಂದು ಹೇಳಿದರು.
ನಾವು 115ಕ್ಕೂ ಹೆಚ್ಚು ಸ್ಥಾನ ಪಡೆಯುತ್ತೇವೆ. ಫಲಿತಾಂಶದ ನಂತರ ನಾವೆಲ್ಲ ಸೇರಿ ಒಟ್ಟಿಗೆ ಮಾತನಾಡುತ್ತೇವೆ. ಮತ ಎಣಿಕೆ ನಂತರ ಸಂಜೆ ಅಥವಾ ಮರುದಿನ ಬೆಳಗ್ಗೆ ಮಾತನಾಡುತ್ತೇನೆ. ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು.