ತುಮಕೂರು: ಕಾಂಗ್ರೆಸ್ ನಾಯಕರು ಸಿಎಂ ಆಗಬೇಕೆಂದು ಹಗಲು ಕನಸು ಕಾಣ್ತಾ ಇದ್ದಾರೆ. ಅವರದ್ದು ತಿರುಕನ ಕನಸು ಅದು ನನಸಾಗೋದಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ವೈ ಟೀಕಿಸಿದ್ದಾರೆ.
ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಬಲದೊಂದಿಗೆ, ನಾವು ಮತ್ತೆ ಅಧಿಕಾರಕ್ಕೆ ಏರೋದನ್ನ ಯಾರಿಂದಲೂ ತಡೆಯೋದಕ್ಕಾಗಲ್ಲ, ಕೇಂದ್ರ ಮತ್ತು ರಾಜ್ಯದಿಂದ ಮೂರು ಸರ್ವೇ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆ ಮೀರಿ ಜನಬೆಂಬಲ ಸಿಗ್ತಾ ಇದೆ. ಇದೆಲ್ಲ ವಾತಾವರಣ ನೋಡಿದ್ರೆ ನಾವು ನಿರೀಕ್ಷೆ ಮಾಡಿದ ಹಾಗೆಯೇ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಪುನರುಚ್ಚರಿಸಿದರು.
ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಆ ಯೋಜನೆಗೆ ಎಲ್ಲಿ ಬೆಲೆ ಇದೆ? ಹಿಂದೆಲ್ಲ ಬೇರೆ ರಾಜ್ಯದಲ್ಲಿ ಯೋಜನೆ ಘೋಷಣೆ ಮಾಡಿದ್ದು ಕಾರ್ಯರೂಪಕ್ಕೆ ಬಂದಿದ್ಯಾ? ಸುಳ್ಳು ಭರವಸೆ ಕೊಡುತ್ತಾರೆ. ಇಂತಹ ಭರವಸೆಗಳಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ, ಬಿಜೆಪಿ ಮೇಲೆ ತುಂಬ ಭಯ ಇದೆ ಎಂದು ಹೇಳಿದರು.