ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಇತ್ತೀಚೆಗೆ ನಡೆದ ಸರ್ವೆಯಲ್ಲಿ ಶೇ.70ರಷ್ಟು ಜನ ಮೋದಿ ಪರ ಇದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶ್ರಮ ಅಗತ್ಯವಿದೆ. ಕಾಂಗ್ರೆಸ್ನವರು ಮುಖ್ಯಮಂತ್ರಿ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. 3 ತಲೆಮಾರಿಗಾಗುಷ್ಟು ಆಸ್ತಿ ಮಾಡಿದ್ದೇವೆಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಂಕ, ನಾಣಿ, ಸೀನ 2-3 ಜನ ನಾನೇ ಸಿಎಂ ಅಂತಾ ಹೇಳುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದ್ದರು ಎಂಬುದು ಗೊತ್ತಾಗಿದೆ. 2 ಸ್ಥಾನ ಕೂಡ ಇಲ್ಲದ ಸಮಯದಲ್ಲಿ ಬಿಜೆಪಿ ಕಟ್ಟುವ ಕೆಲಸ ಮಾಡಿದ್ದೇವೆ. ಇದರ ಪರಿಣಾಮ ಇಂದು ರಾಜ್ಯದಲ್ಲಿ ಬಿಜೆಪಿ ಎದ್ದು ನಿಂತಿದೆ ಎಂದು ಹೇಳಿದರು.
ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿರುವ ಕಾರಣ ಎಸ್ಸಿ ಎಸ್ಟಿ ಜನ ನಮ್ಮ ಜೊತೆ ಬರುತ್ತಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಈ ಒಂದು ಸಲ ಕಾಂಗ್ರೆಸ್ ಸೋಲಿಸಿದರೆ ದೇಶದಲ್ಲಿ ಕಾಂಗ್ರೆಸ್ ಧೂಳೀಪಟ ಆಗುತ್ತದೆ. ಇಲ್ಲಿ ಸ್ವಲ್ಪ ಮಾತ್ರ ಕಾಂಗ್ರೆಸ್ ಉಸಿರಾಡುತ್ತಿದೆ ಎಂದು ಹೇಳಿದರು.