Saturday, June 10, 2023
spot_img
- Advertisement -spot_img

ಚುನಾವಣೆಗೆ ನಿಲ್ಲೋದಿಲ್ಲ, ಇನ್ಮುಂದೆ ಸದನಕ್ಕೆ ಬರೋದಿಲ್ಲ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕ

ಬೆಂಗಳೂರು: ನಾನು ಈ ಬಾರಿ ವಿಧಾನಸಭೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ನಾನು ಮತ್ತೆ ಈ ಸದನಕ್ಕೆ ಬರೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾವುಕರಾಗಿ ನುಡಿದಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಗದ್ಗದಿತರಾಗಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, “ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಈಗಾಗಲೇ ನನಗೆ 80 ವರ್ಷ ವಯಸ್ಸಾಗಿದೆ. ವಯಸ್ಸಿನ ಕಾರಣದಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನ ಮಾಡಿದ್ದೇನೆ” ಅಂತ ಹೇಳಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ​ನ್ನು ಸ್ವಾಗತಿಸುತ್ತೇನೆ. ಅವರು ಉತ್ತಮ ಬಜೆಟ್​ ಮಂಡಿಸಿದ್ದಾರೆ. ಬೊಮ್ಮಾಯಿಯವರು ಉಳಿತಾಯ ಬಜೆಟ್ ಕೊಟ್ಟಿದ್ದಾರೆ, ಸೋರಿಕೆ ತಡೆದಿದ್ದಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಗುರು ಆಗಿದ್ದಾರೆ. ಅವರ ನಾಯಕತ್ವದಲ್ಲಿ ದೇಶ ಸದೃಢವಾಗಿದೆ. ನಾವು ಉತ್ತಮ ಆಡಳಿತ ಕೊಟ್ಟಿದ್ದೇವೆ ಎಂದು ಇದೇ ವೇಳೆ ಸಂತಸಪಟ್ಟರು.

ಯಡಿಯೂರಪ್ಪ ಅವರ ವ್ಯಕ್ತಿತ್ವ ದೊಡ್ಡದು. ಅವರಿಂದ ಎಲ್ಲ ಪಕ್ಷದವರೂ ಕಲಿಯಬೇಕಾದ ವಿಚಾರಗಳು ಬಹಳಷ್ಟಿವೆ ಎಂದು ವಿಧಾನಸಭೆ ಉಪನಾಯಕ ಯು.ಟಿ. ಖಾದರ್ ಇದೇ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Related Articles

- Advertisement -spot_img

Latest Articles