ಬಾಗಲಕೋಟೆ: ಈ ಬಾರಿ ಬಿಜೆಪಿ ಸರ್ಕಾರ ರಚನೆಯಾದರೆ ರಾಜ್ಯದಲ್ಲಿ ಮೊದಲ ಬಾರಿಗೆ ರೈತರಿಗೆ ಜೀವ ವಿಮೆ ಜಾರಿಗೆ ತರುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಇಳಕಲ್ನಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿ , ರೈತ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡುತ್ತೇವೆ. ಆಕಸ್ಮಿಕವಾಗಿ ರೈತ ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ರೂ. ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ನಾನು ನಿಮಗೆ ಕೈ ಜೋಡಿಸಿ ಪ್ರಾರ್ಥನೆ ಮಾಡುತ್ತೇನೆ. ದೊಡ್ಡನಗೌಡ ಪಾಟೀಲ ಸಿಕ್ಕಿರುವುದು ನಿಮ್ಮ ಪುಣ್ಯ. ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಈ ಸಾರಿ ಬಿಜೆಪಿ ಗೆಲ್ಲಬೇಕು. ನಿಮ್ಮೆಲ್ಲರ ಆಶೀರ್ವಾದದ ಮೂಲಕ ಇಡೀ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಕೊಡುತ್ತಿದ್ದೇವೆ. ನೀವೆಲ್ಲ ಆಶೀರ್ವಾದ ಮಾಡಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿ ಎಂದರು.
ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಈ ಮೂರು ಪಕ್ಷಗಳು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು, ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂಬ ಪಣ ತೊಟ್ಟಿವೆ. ಮತದಾರ ಪ್ರಭು ವಿಜಯದ ಮಾಲೆ ಯಾರ ಕೊರಳಿಗೆ ಹಾಕುತ್ತಾರೆ ಅನ್ನೋದು ಕಾದುನೋಡಬೇಕಿದೆ.