ಶಿವಮೊಗ್ಗ: ಎಲ್ಲರ ಆಶೀರ್ವಾದದಿಂದ ವಿಜಯೇಂದ್ರ 40 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡಲಿದೆ” ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಸಂಸದ ರಾಘವೇಂದ್ರ ತಮ್ಮ ಕುಟುಂಬ ಸದಸ್ಯರೊಡನೆ ಶಿಕಾರಿಪುರದಲ್ಲಿ ಮತದಾನ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದೇ ವೇಳೆ ಬಿ. ವೈ. ರಾಘವೇಂದ್ರ ಮಾತನಾಡಿ, “ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. ಮತದಾನಕ್ಕೂ ಮುನ್ನ ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತಗಟ್ಟೆ ಸಂಖ್ಯೆ 134ರಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದರು. ಬಳಿಕ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಪ್ರತಿ ಬಾರಿಯೂ ಯಡಿಯೂರಪ್ಪ ಬೆಳ್ಳಂಬೆಳಗ್ಗೆಯೇ ಮತದಾನ ಮಾಡುತ್ತಾರೆ. ಯಡಿಯೂರಪ್ಪ ಜೊತೆಗೆ ಪುತ್ರ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ. ವೈ. ವಿಜಯೇಂದ್ರ ಸಹ ಮತದಾನ ಮಾಡಿದರು.