ಬೆಂಗಳೂರು : ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ನರೇಂದ್ರ ಮೋದಿಯವರನ್ನು ಮಾಜಿ ಸಿಎಂ ಯಡಿಯೂರಪ್ಪ ಕೊಂಡಾಡಿದರು.
449 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾತನಾಡಿದರು. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ ಎಂದರು.
ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು. ಕೊಟ್ಟ ಮಾತಿನಂತೆ ಏರ್ಪೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವುದು ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದು ಸಂತಸಪಟ್ಟರು.
ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪಗೆ ನೇಗಿಲ ಕಾಣಿಕೆ ನೀಡಿದ್ದಾರೆ. ಮೋದಿ ಬಿಎಸ್ವೈಗೆ ಗೌರವ ಸಮರ್ಪಣೆ ಮಾಡಿದ್ದು, ಹಸಿರು ಶಾಲು ಹೊದಿಸಿ, ಪೇಟ ತೊಡಿಸಿ, ಸನ್ಮಾನ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಸಾಥ್ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಜರಾಗಿದ್ದರು.