ಉಡುಪಿ: ಮೋದಿಗೆ ಕೈ ಮುಗಿಯಬಾರದು ಎಂದು ನಾವು ಹೇಳಲು ಆಗುವುದಿಲ್ಲಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕೀಯ ಪಕ್ಷದ ಕಾರ್ಯಕರ್ತನಾಗಿ ಪ್ರಧಾನ ಮಂತ್ರಿಗೆ ಕೈಮುಗಿಯುತ್ತಾರೆ. ಯಾರೇ ಕೈಮುಗಿದರೂ ವಾಪಸ್ ಕೈಮುಗಿಯುವುದು ಪ್ರಧಾನ ಮಂತ್ರಿಗಳು ಇಟ್ಟುಕೊಂಡ ಸಂಪ್ರದಾಯ ಎಂದು ತಿಳಿಸಿದರು.
ಭಾರತೀಯನೊಬ್ಬ ಪ್ರಧಾನಿಗೆ ಕೈಮುಗಿದಿದ್ದಾನೆ. ಆತ ರೌಡಿಶೀಟರ್ ಆಗಿದ್ದರೆ ಯಾವ ರಕ್ಷಣೆಯೂ ಇಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಏನಾದರು ಅಪರಾಧ ಮಾಡಿದರೆ ಸಂವಿಧಾನದ ಪ್ರಕಾರ ಕ್ರಮ ಆಗುತ್ತದೆ. ಬಿಜೆಪಿ ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಗೆ ಅಭೂತಪೂರ್ವ ಸ್ಪಂದನೆಯನ್ನು ಜನತೆ ನೀಡಿದ್ದಾರೆ ಎಂದು ಅಭಿಪ್ರಾಯಟಪಟ್ಟರು.
ಫೈಟರ್ ರವಿ, ಪ್ರಧಾನಿ ನರೇಂದ್ರ ಮೋದಿ ಪರಸ್ಪರ ನಮಸ್ಕಾರ ಮಾಡಿಕೊಂಡ ಫೋಟೊ ಬಹಳಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ , ಜೆಡಿಎಸ್ ಪಕ್ಷದವರು ಮೋದಿಯವರ ವಿರುದ್ಧ ಕಿಡಿಕಾರಿದ್ದು , ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ.