Wednesday, November 29, 2023
spot_img
- Advertisement -spot_img

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ‌

ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಇಂದು ಸಂಜೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಾಗಿ ವೀಕ್ಷಕರಾಗಿ ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ಮಧ್ಯಾಹ್ನ ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್‌: ಸಚಿವ ಮಧು ಬಂಗಾರಪ್ಪ

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿ.ವೈ. ವಿಜಯೇಂದ್ರ‌, ಭಾರತದ ಆರ್ಥಿಕ ಸದೃಢತೆಗೆ ಹೊಸ ಮುನ್ನುಡಿ ಬರೆದು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಹೆಗಲು ಕೊಟ್ಟಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಕೋರಿ ಅವರ ಆಶೀರ್ವಾದ ಪಡೆಯಲಾಯಿತು ಎಂದು ಬರೆದುಕೊಂಡಿದ್ದಾರೆ.

ಬುಧವಾರ ಶಾಸಕಾಂಗ ಸಭೆ ಕುರಿತು ಬಿ.ವೈ. ವಿಜಯೇಂದ್ರ‌ ಮಾತನಾಡಿ, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಚದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ವೀಕ್ಷಕರಾಗಿ ಯಾರು ಬರುತ್ತಾರೆ ಎಂಬುದು ನಾಳೆ ಗೊತ್ತಾಗುತ್ತದೆ ಎಂದರು.

ಸಮಾವೇಶದ ಬಗ್ಗೆ ಹಿರಿಯರ ಜೊತೆ ಚರ್ಚಿಸಿದ ನಂತರ ತೀರ್ಮಾನ ಮಾಡಲಾಗುವುದು. ಇನ್ನು ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಶಾಸಕರ ಅಭಿಪ್ರಾಯ ಮುಖ್ಯ. ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ: ಇಂದು ಫೈನಲ್ ಆಗುತ್ತಾ ವಿಪಕ್ಷ ನಾಯಕನ ಹೆಸರು?; ಶಾಸಕಾಂಗ ಸಭೆ ಕರೆದ ವಿಜಯೇಂದ್ರ!

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕಸರತ್ತು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಡಾ. ಸಿ.ಎನ್‌.ಅಶ್ವತ್ಥ ನಾರಾಯಣ್‌, ಹಾಗೂ ಆರ್‌ ಅಶೋಕ್‌ ಅವರು ರೇಸ್ ನಲ್ಲಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles