ಬೆಂಗಳೂರು : ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ನಾಳೆ (ನ.15) ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಗ್ಗೆ 9:30ಕ್ಕೆ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರಿಂದ ವಿಜಯೇಂದ್ರಗೆ ಜವಾಬ್ದಾರಿ ಹಸ್ತಾಂತರ ನಡೆಯಲಿದೆ.
ಇದನ್ನೂ ಓದಿ : ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ವೈ ವಿಜಯೇಂದ್ರ
ಈ ಕುರಿತು ಟ್ವಿಟ್ಟರ್‌ನಲ್ಲಿ ಆಹ್ವಾನ ಪತ್ರಿಕೆ ಹಂಚಿಕೊಂಡಿರುವ ವಿಜಯೇಂದ್ರ, ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆ ಇಟ್ಟು ವಹಿಸಿರುವ ಜವಬ್ದಾರಿಯನ್ನು ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಸ್ವೀಕರಿಸಲಿದ್ದೇನೆ. ಎಲ್ಲರು ಬಂದು ಹರಸಿ, ಹಾರೈಸಿ, ಆಶೀರ್ವದಿಸಿ ಎಂದು ಮನವಿ ಮಾಡಿದ್ದಾರೆ.


ಸಿಂಗಾರಗೊಂಡ ಬಿಜೆಪಿ ಕಚೇರಿ : ಬಿವೈ ವಿಜಯೇಂದ್ರ ಬಿಜೆಪಿ ನೂತನ ಅಧ್ಯಕ್ಷರಾಗಿ ನಾಳೆ ಪದಗ್ರಹಣ ಮಾಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕೇಸರಿಮಯವಾಗಿದೆ. ಬಿಜೆಪಿ ಕಚೇರಿಯ ಒಂದು ಕಿಲೋ ಮೀಟರ್ ಆಸುಪಾಸಿನಲ್ಲಿ ಪಕ್ಷದ ಬಾವುಟ ಕಟ್ಟಿ, ಸಿಂಗರಿಸಲಾಗಿದೆ. ಸಾಂಪ್ರದಾಯಿಕ ಚಪ್ಪರ ಹಾಕಿ ಮಾವಿನ ಎಲೆಗಳಿಂದ ಕಚೇರಿಯನ್ನು ಅಲಂಕಾರ ಮಾಡಲಾಗಿದೆ.
ಪದಗ್ರಹಣಕ್ಕೂ ಮುಂಚಿತವಾಗಿ ಇಂದು ಕೋಲಾರ ಜಿಲ್ಲೆಯ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.