ಉಡುಪಿ : ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ತನ್ನ ಹೆಸರು ಹಾಳು ಮಾಡಿಕೊಂಡಿದೆ. ಹೀಗಾಗಿ ನಾನು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಕಾಂಗ್ರೆಸ್ ಪಕ್ಷಕ್ಕೆ ಸೇರಲು ಗ್ರೀನ್ ಸಿಗ್ನಲ್ ಕೊಟ್ಟಿದ್ದೇನೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಸದ್ಯ ‘ಆಪರೇಷನ್ ಹಸ್ತ’ ಭಾರೀ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ ಸೆರ್ಪಡೆಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ರಾಜ್ಯ ಘಟಾನುಘಟಿ ನಾಯಕರ ಹೆಸರುಗಳು ಕೇಳಿ ಬರುತ್ತಲೇ ಇದೆ. ಈದೀಗ ಕರಾವಳಿಯ ಮಾಜಿ ಶಾಸಕ ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ
ಈ ಬಗ್ಗೆ ನಗರದಲ್ಲಿ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳೆಯುವವರನ್ನ ಬಿಜೆಪಿ ಪಕ್ಷ ಬಿಡುವುದಿಲ್ಲ; ಕಾಲೆಳೆದು ಮಲಗಿಸುವ ಕೆಲಸ ಪರಿಪಾಠ ಮಾಡಿಕೊಂಡಿದೆ. ಪಕ್ಷ ನನಗೆ ಸೀಟ್ ನೀಡದೆ ಬಹಳ ಬೇಸರ ಮಾಡಿದೆ. ನನ್ನನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡಿದೆ. ಕೆಲವು ನಾಯಕರು ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದರು. ಈಗ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ’ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.