ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನ್ನು ಜನರಿಗೆ ಮುಟ್ಟಿಸಲು ವಿಡಿಯೋ ಸಂದೇಶದ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಮನೆ ಯಜಮಾನಿಗೆ 2,000 ರೂ. ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಭರವಸೆ ಈಗಾಗಲೇ ಘೋಷಣೆ ಮಾಡಿದೆ. ಈ ಮೂರು ಭರವಸೆಗಳ ಗ್ಯಾರಂಟಿ ಕಾರ್ಡ್ ರಾಜ್ಯದ ಪ್ರತಿ ಮನೆಗಳಿಗೆ ತಲುಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಕಾಂಗ್ರೆಸ್ ಮಾಡಿರುವ ಮೂರು ಚುನಾವಣಾ ಭರವಸೆಗಳ ಗ್ಯಾರಂಟಿ ಕಾರ್ಡ್ ರಾಜ್ಯದ ಜನರಿಗೆ ತಲುಪಿಸುವ ಕಾರ್ಯ ಆರಂಭಿಸಿದ್ದು, ನಾಳೆಯಿಂದ ಪ್ರತಿ ಗ್ರಾಮಕ್ಕೂ ತಲುಪಿಸಲು ಮುಂದಾಗಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯರ ಸಹಿ ಇರುವ ಗ್ಯಾರಂಟಿ ಕಾರ್ಡನ್ನು ಪಕ್ಷ ಜನರಿಗೆ ವಿತರಿಸುತ್ತಿದೆ. ಕನಿಷ್ಠ ದಿನಕ್ಕೆ 50 ಮನೆಗಳಿಗೆ ಭೇಟಿ ನೀಡಿ ಗ್ಯಾರಂಟಿ ಕಾರ್ಡ್ ನೀಡಲು ಎಲ್ಲಾ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಅನೇಕ ಮಾಜಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷ ಸೇರುವ ಶಾಸಕರ ಪಟ್ಟಿಯನ್ನು ಘೋಷಿಸುತ್ತೇವೆ. ಈ ಸಂಬಂಧ ಚರ್ಚೆ ನಡೆಯುತ್ತಿದ್ದು, ಈಗ ಯಾರ ಹೆಸರನ್ನೂ ಬಹಿರಂಗಪಡಿಸುವುದಿಲ್ಲ, ಪಕ್ಷದ ಸಿದ್ದಾಂತ ಮತ್ತು ನಾಯಕತ್ವ ಒಪ್ಪಿ, ಯಾವುದೇ ಷರತ್ತು ಇಲ್ಲದೆ ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿಕೆಶಿವಕುಮಾರ್ ಹೇಳಿದ್ದರು.