ನವದೆಹಲಿ : ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರ ಮುಕ್ತಾಯಗೊಂಡಿದೆ. ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳು ಮತ್ತು ಛತ್ತೀಸ್‌ಗಢದ ಎರಡನೇ ಹಂತದ 70 ಕ್ಷೇತ್ರಗಳಿಗೆ ನಾಳೆ (ನವೆಂಬರ್ 17) ಮತದಾನ ನಡೆಯಲಿದೆ. ಇಂದು ಕೊನೆಯದಾಗಿ ಅಭ್ಯರ್ಥಿಗಳು ಮತದಾರರ ಮನೆ-ಮನೆಗೆ ತೆರಳಿ ಮತಯಾಚನೆ ಮಾಡಲು ಅವಕಾಶವಿದೆ.
ಅಭ್ಯರ್ಥಿಗಳು ಇಂದು ಸಾರ್ವಜನಿಕ ಸಭೆ, ಬೀದಿ ಸಭೆ, ಮೆರವಣಿಗೆ ಮತ್ತು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚುನಾವಣಾ ಆಯೋಗವು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳಿಗೆ ಈ ಹಿಂದೆ ನೀಡಿದ್ದ ವಾಹನ ಅನುಮತಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಿದೆ.
ಇದನ್ನೂ ಓದಿ : ‘ಯತೀಂದ್ರ ಮಾತಾಡಿದ್ದು ಸಿಎಸ್ಆರ್ ಫಂಡಿಂಗ್ ಬಗ್ಗೆ, ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ’
ಸಾಮಾನ್ಯವಾಗಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಿದ್ದರೂ, ಮಧ್ಯಪ್ರದೇಶದ ತೀವ್ರ ನಕ್ಸಲ್ ಪೀಡಿತ ಪ್ರದೇಶದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಮತದಾನ ನಡೆಯಲಿದೆ ಎಂದು ಆಕಾಶವಾಣಿ ವರದಿ ಮಾಡಿದೆ.
ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ 5.6 ಕೋಟಿ ಮತದಾರರಿದ್ದಾರೆ. ಇವರಲ್ಲಿ 2.88 ಕೋಟಿ ಪುರುಷ ಮತದಾರರು ಮತ್ತು 2.72 ಕೋಟಿ ಮಹಿಳಾ ಮತದಾರರಿದ್ದಾರೆ. ವಿಶೇಷವಾಗಿ ಈ ಬಾರಿ ಒಟ್ಟು 22.36 ಲಕ್ಷ ಯುವ ಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಛತ್ತೀಸ್‌ಗಢದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 958 ಅಭ್ಯರ್ಥಿಗಳು ಕಣದಲ್ಲಿದ್ದು, 1,63,14,489 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.