ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನದ ವೇಳೆ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ ವಿವಿಪ್ಯಾಟ್ ಮಶೀನ್‌ಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಅವುಗಳನ್ನು ಚುನಾವಣಾ ಸಿಬ್ಬಂದಿ ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ.
ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್‌ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.