ಬೆಂಗಳೂರು: ರಾಜ್ಯದಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.
ಕರ್ನಾಟಕದಿಂದ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಇದನ್ನೂ ಓದಿ: ಸಮೀಕ್ಷೆಯಲ್ಲಿ ‘ಕಮಲ’ ಕಮಾಲ್; ಈಗ ಚುನಾವಣೆ ನಡೆದ್ರೆ ಮೋದಿ ಮತ್ತೆ ಅಧಿಕಾರಕ್ಕೆ!
ಇನ್ನೊಂದೆಡೆ ತಮಿಳುನಾಡಿಗೆ ನೀರು ಬಿಡುವ ಸಂಬಂಧ ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಕರ್ನಾಟಕದ ಜಲಾಶಯಗಳಿಂದ ದಿನಕ್ಕೆ 24,000 ಕ್ಯೂಸೆಕ್ ನೀರು ಬಿಡುಗಡೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯು ಸಾಮಾನ್ಯ ನೀರಿನ ವರ್ಷ ಎಂಬ ಊಹೆಯನ್ನು ಆಧರಿಸಿದೆ. ತಮಿಳುನಾಡಿನ ಅರ್ಜಿಯು ಈ ಜಲ ವರ್ಷ ಸಾಮಾನ್ಯವಾಗಿದೆ ಮತ್ತು ಸಂಕಷ್ಟದ ವರ್ಷವಲ್ಲ ಎಂಬ ತಪ್ಪು ಕಲ್ಪನೆಯನ್ನು ಆಧರಿಸಿದೆ. ಇದೇ ವೇಳೆ ಶೇ. 25ರಷ್ಟು ಮಳೆ ಕೊರತೆಯಾಗಿದೆ. ಈ ಆಧಾರದ ಮೇಲೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಜಾಗೊಳಿಸಲು ಅರ್ಹವಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.