ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಏಳು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಮಂಗಳವಾರ ಸಿಸಿಬಿ ಪೊಲೀಸರು ಉಡುಪಿಯ ಕೃಷ್ಣ ಮಠದ ಬಳಿ ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಚೈತ್ರಾ ಅವರಿಗೆ ಕಾಂಗ್ರೆಸ್ ವಕ್ತಾರೆ ಅಂಜುಮ್ ತನ್ನ ಮನೆಯಲ್ಲಿ ಆಶ್ರಯ ನೀಡಿದ್ದಾರೆ ಎನ್ನಲಾಗಿದ್ದು, ಸುಮಾರು ಒಂದು ವಾರಗಳ ಕಾಲ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಅಂಜುಮ್ ಮನೆಯಲ್ಲಿ ಚೈತ್ರಾ ಅಡಗಿ ಕುಳಿತಿದ್ದರು ಎಂದು ಆರೋಪಿಸಲಾಗಿದೆ. ಹೀಗಾಗಿ, ಅಂಜುಮ್ ಅವರಿಗೂ ಸಿಸಿಬಿ ನೋಟಿಸ್ ನೀಡಿದೆ ಎಂಬ ಮಾಹಿತಿ ದೊರೆತಿದೆ.
ಇದನ್ನೂ ಓದಿ : ಉದ್ಯಮಿಗೆ ಚೈತ್ರಾ ಕುಂದಾಪುರ ಪಂಗನಾಮ ಹಾಕಿದ್ದೇಗೆ ಗೊತ್ತಾ?
ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಮತ್ತು ಆಕೆಯ ತಂಡ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ ಹಣ ಪಡೆದು ವಂಚಿಸಿದ್ದರು. ಈ ಬಗ್ಗೆ ಗೋವಿಂದ ಬಾಬು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳಾದ ಗಗನ್ ಕಡೂರು ಮತ್ತು ಪ್ರಸಾದ್ ಎಂಬವರನ್ನು ವಶಕ್ಕೆ ಪಡೆದಿದ್ದರು. ಈ ವಿಷಯ ತಿಳಿದ ಚೈತ್ರಾ ಬಂಧನ ಭೀತಿಯಿಂದ ಕಾಂಗ್ರೆಸ್ ವಕ್ತಾರೆಯ ಮನೆಯಲ್ಲಿ ಅಡಗಿ ಕುಳಿತಿದ್ದರು ಎಂದು ತಿಳಿದು ಬಂದಿದೆ.
ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಅಂಜುಂಗೆ ಸಂಕಷ್ಟ ಎದುರಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.