ಕೊಲ್ಕತ್ತಾ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯ ಕ್ರಿಕೆಟ್ ತಂಡವನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಯನ್ನು ಉಲ್ಲೇಖಿಸಿರುವ ಅವರು, “ಈಗ ಎಲ್ಲವೂ ಕೇಸರಿ ಬಣ್ಣಕ್ಕೆ ತಿರುಗುತ್ತಿದೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆಯಿದೆ ಮತ್ತು ಅವರು ವಿಶ್ವ ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸ ನನಗಿದೆ. ಆದರೆ, ಅಭ್ಯಾಸ ಮಾಡುವಾಗ ಅವರು ತೊಡುವ ಉಡುಗೆ ಕೂಡ ಕೇಸರಿ ಬಣ್ಣಕ್ಕೆ ತಿರುಗಿದೆ. ಈ ಮೊದಲು ಟೀಂ ಇಂಡಿಯಾ ಆಟಗಾರರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು” ಎಂದಿದ್ದಾರೆ.
ಇದನ್ನೂ ಓದಿ : ಮಾಜಿ ಸಂಸದೆ, ನಟಿ ವಿಜಯಶಾಂತಿ ಕಾಂಗ್ರೆಸ್ ಸೇರ್ಪಡೆ!
ಮೆಟ್ರೋ ನಿಲ್ದಾಣಗಳಿಗೂ ಕೇಸರಿ ಬಣ್ಣ ಬಳಿಯಲಾಗುತ್ತಿದೆ. ಎಲ್ಲದಕ್ಕೂ ‘ನಮೋ’ ಎಂದು ಹೆಸರಿಡಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
ಟೀಂ ಇಂಡಿಯಾ ಆಟದ ವೇಳೆ ಧರಿಸುವ ಜೆರ್ಸಿ ಈಗಲೂ ನೀಲಿ ಬಣ್ಣದಲ್ಲೇ ಇದೆ. ಅಭ್ಯಾಸದ ಸಮಯದಲ್ಲಿ ಧರಿಸುವ ಜೆರ್ಸಿಯ ಬಣ್ಣ ಮಾತ್ರ ಕೇಸರಿಯಾಗಿ ಬದಲಾಗಿದೆ.
ವಿಶ್ವಕಪ್‌ನಲ್ಲಿ ಅದ್ಬುತ ಪ್ರದರ್ಶನದ ಮೂಲಕ ಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ, ನಾಳೆ (ನ.19) ಆಸ್ಟ್ರೇಲಿಯಾ ವಿರುದ್ಧ ಸೆಣೆಸಾಡಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.