Thursday, September 28, 2023
spot_img
- Advertisement -spot_img

Breaking News: ಎಲ್‌ಪಿಜಿ ದರ ₹200 ಇಳಿಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರವು ದೇಶದ ಜನತೆಗೆ ಸಿಹಿಸುದ್ದಿ ನೀಡಿದ್ದು, ಎಲ್‌ಪಿಜಿ ಸಿಲಿಂಡರ್‌ಗೆ 200 ರೂಪಾಯಿ ಕಡಿತ ಮಾಡುವುದಾಗಿ ಘೋಷಿಸಿದೆ.

ಇಂದು ನಡೆದ ಕೇಂದ್ರ ಕ್ಯಾಬಿನೆಟ್‌ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು.

ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ ರೂ 200 ಇಳಿಸಲಾಗಿದೆ. ಅದೇ ಸಮಯದಲ್ಲಿ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ ಅಡಿಯಲ್ಲಿ 75 ಲಕ್ಷ ಹೊಸ ಗ್ಯಾಸ್ ಸಂಪರ್ಕಗಳನ್ನು ನೀಡಲಾಗುವುದು. ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ ಫಲಾನುಭವಿಗಳು ಈಗಾಗಲೇ ರೂ 200 ಸಬ್ಸಿಡಿಯನ್ನು ಪಡೆಯುತ್ತಿದ್ದಾರೆ. ಈ ಪರಿಷ್ಕೃತ ದರ ಅವರಿಗೂ ಅನ್ವಯಿಸಲಿದೆ. ಅಂದರೆ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 400 ರೂ ಕಡಿತವಾಗಲಿಡದೆ ಎಂದು ಠಾಕೂರ್‌ ಹೇಳಿದರು.

ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಅಥವಾ ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಹೋಗಲಿದೆ.

ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1,100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.

ಕಚ್ಚಾತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್‌ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles