Wednesday, March 22, 2023
spot_img
- Advertisement -spot_img

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ : ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ :ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ್ ಕಾರಜೋಳರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಯವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಜೋಶಿ ಅನಂತ ಧನ್ಯವಾದಗಳು ತಿಳಿಸಿದ್ದು, ಜನವರಿ 2 ರಂದು ಮಹದಾಯಿ ವಿಚಾರವಾಗಿ ಕಾಂಗ್ರೆಸ್ ಬೃಹತ್ ಸಮಾವೇಶ ಮಾಡಲಿದೆ. ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ನೀಡಿದೆ.

Related Articles

- Advertisement -

Latest Articles