ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು 10 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಕೇಸ್‌ನಲ್ಲಿ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ, ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತಂದಿದ್ದರು. ಈ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಬೇಕಿರುವ ಹಿನ್ನೆಲೆ ಚೈತ್ರಾ ಅವರನ್ನು ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ಕೇಳಿದ್ದರು.
ಉಡುಪಿಯಿಂದ ಬೆಂಗಳೂರಿಗೆ ಕರೆತಂದಿದ್ದ ಚೈತ್ರಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆ ಹಿನ್ನೆಲೆ ಚೈತ್ರಾ ಅವರನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇದನ್ನಾಲಿಸಿದ ಕೋರ್ಟ್ ಚೈತ್ರಾ ಅವರನ್ನು ಕಸ್ಟಡಿಗೆ ಒಪ್ಪಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.