ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಏಳು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಮಂಗಳವಾರ ಸಿಸಿಬಿ ಪೊಲೀಸರು ಉಡುಪಿಯ ಕೃಷ್ಣ ಮಠದ ಬಳಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೃಷ್ಣ ಮಠದ ಪಾಕಿಂಗ್ ಏರಿಯಾದಲ್ಲಿ ಚೈತ್ರಾ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಹೈಡ್ರಾಮಾ ಮಾಡಿದ ಚೈತ್ರಾ, ಕೈಬಳೆ ಒಡೆದುಕೊಂಡು, ಉಂಗುರ ನುಂಗಲು ಯತ್ನಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾತ್ರಿ ಚೈತ್ರಾ ಮತ್ತು ಶ್ರೀಕಾಂತ್ ಅವರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು, ಇಂದು (ಸೆ. 13) ಉಡುಪಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ : ಉದ್ಯಮಿಗೆ ಚೈತ್ರಾ ಕುಂದಾಪುರ ಪಂಗನಾಮ ಹಾಕಿದ್ದೇಗೆ ಗೊತ್ತಾ?
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ನಾಲ್ಕೈದು ಜನರ ತಂಡದ ಮೂಲಕ ನಕಲಿ ಬಿಜೆಪಿ- ಆರೆಸ್ಸೆಸ್ ನಾಯಕರನ್ನು ಸೃಷ್ಟಿ ಮಾಡಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಮೂರು ಹಂತಗಳಲ್ಲಿ ಏಳು ಕೋಟಿ ರೂಪಾಯಿ ಹಣ ಪೀಕಿಸಿದ್ದಾಳೆ ಎಂದು ಆರೋಪಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.