ಬೆಂಗಳೂರು: ಉದ್ಯಮಿಗೆ ಕೋಟಿಗಟ್ಟಲೆ ವಂಚನೆ ಮಾಡಿರುವ ಆರೋಪದಲ್ಲಿ ಸಿಸಿಬಿ ಕಸ್ಟಡಿಯಲ್ಲಿರುವ ಚೈತ್ರಾ ಕುಂದಾಪುರ ಇಂದು ಫುಲ್ ಖುಷಿಯಾಗಿ ಕಾಣಿಸಿಕೊಂಡಿದ್ದಾರೆ.
ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಲಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರು ಸ್ವಾಮೀಜಿ ಅರೆಸ್ಟ್ ಆಗಿದ್ದಾರೆ ಎಂದು ಹೇಳಿದ ಕೂಡಲೇ ಚೈತ್ರಾ ಫುಲ್ ಖುಷಿಯಿಂದ ಸಿಸಿಬಿ ಅಧಿಕಾರಿಗಳೊಂದಿಗೆ ತೆರಳಿದರು.
ಸ್ವಾಮೀಜಿ ಸಿಗಲಿ ದೊಡ್ಡವರ ಹೆಸರು ಹೊರ ಬರುತ್ತೆ: ಚೈತ್ರಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಹೇಳಿಕೆ ನೀಡಿದ್ದ ಚೈತ್ರಾ, ಹಾಲಶ್ರೀ ಸ್ವಾಮೀಜಿ ಸಿಗಲಿ.. ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಹೆಸರು ಹೊರಬರಲಿದೆ ಎಂದಿದ್ದರು. ಇದೀಗ ಸ್ವಾಮೀಜಿ ಅರೆಸ್ಟ್ ಬೆನ್ನಲ್ಲೇ ಚೈತ್ರಾ ಅವರ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಹಿಂದುತ್ವ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಈ ಹಿಂದೆ ಚೈತ್ರಾ ಅವರ ಬಗ್ಗೆ ಬಿಜೆಪಿಯ ಹಲವು ನಾಯಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಚೈತ್ರಾ ಅವರನ್ನು ಸಿಸಿಬಿ ವಶಕ್ಕೆ ಪಡೆದ ನಂತರ, ಚೈತ್ರಾಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿಯವರೇ ಹೇಳಿದ್ದಾರೆ.
ಇದನ್ನೂ ಓದಿ: BREAKING NEWS : ಚೈತ್ರಾ ಕುಂದಾಪುರ ವಂಚನೆ ಪ್ರಕರಣ, ಒರಿಸ್ಸಾದಲ್ಲಿ ಹಾಲಶ್ರೀ ಅರೆಸ್ಟ್
ಇದೀಗ ಹಾಲಶ್ರೀ ಸ್ವಾಮೀಜಿ ಬಂಧನವಾಗಿರುವುದರಿಂದ ಚೈತ್ರಾ ಕುಂದಾಪುರ ಹೇಳಿದಂತೆ ಈ ಕೇಸ್‌ನಲ್ಲಿ ಹಲವು ಪ್ರಭಾವಿಗಳು ಹೆಸರು ಹೊರಬರಲಿದೆಯಾ ಎನ್ನುವ ಪ್ರಶ್ನೆ ಎದುರಾಗಿದ್ದು, ಒಂದು ವೇಳೆ ಸ್ವಾಮೀಜಿ ಬಾಯಿಬಿಟ್ಟರೆ ಯಾರೆಲ್ಲರ ಹೆಸರು ಬಯಲಿಗೆ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚನೆ ನಡೆಸಿರುವ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಿರೇಹಡಗಲಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನ ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.