ಅಮರಾವತಿ: ಕೌಶಲ ಅಭಿವೃದ್ಧಿ ನಿಗಮದ ಬಹುಕೋಟಿ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿರುವ ಅರ್ಜಿಯನ್ನು ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಸೆಪ್ಟೆಂಬರ್ 19ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೂ ನಾಯ್ಡು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಂದ್ರಬಾಬು ನಾಯ್ಡು ಪರ ವಕೀಲರು, ಮಾಜಿ ಮುಖ್ಯಮಂತ್ರಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವಾಗ ಸಿಐಡಿ ನಿಗದಿಪಡಿಸಿದ ಕಾರ್ಯವಿಧಾನವನ್ನು (ಪಿಸಿ ಆಕ್ಟ್ 2018 ರ ಸೆಕ್ಷನ್ 17 (ಎ) (ಸಿ)) ಅನುಸರಿಸಿಲ್ಲ ಎಂದು ವಾದಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ; ಪತ್ರಕರ್ತ ಸುಧೀರ್ ಚೌಧರಿ ವಿರುದ್ಧ ಎಫ್‌ಐಆರ್
ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ (ಸಿಐಡಿ) ದಾಖಲಿಸಿರುವ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಮತ್ತು ಪ್ರಸ್ತುತ ರಾಜಮಹೇಂದ್ರವರಂನಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.
ವಿಜಯವಾಡದ ಸ್ಥಳೀಯ ನ್ಯಾಯಾಲಯವು ಮಂಗಳವಾರ ನಾಯ್ಡು ಅವರ ಗೃಹ ಬಂಧನ ಅರ್ಜಿಯನ್ನು ತಿರಸ್ಕರಿಸಿದ ನಂತರ, ಮಾಜಿ ಮುಖ್ಯಮಂತ್ರಿಗಳ ವಕೀಲರ ತಂಡವು ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.