ಅಮರಾವತಿ: ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡ ನ್ಯಾಯಾಲಯವು ಎನ್. ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸರ್ಕಾರದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ತೆಲುಗು ದೇಶಂ ಪಕ್ಷ (ಟಿಡಿಪಿ) ಸೋಮವಾರ ಆಂಧ್ರಪ್ರದೇಶ ಬಂದ್‌ಗೆ ಕರೆ ನೀಡಿದ್ದು, ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಬಂದ್ ಕರೆಗೆ ತನ್ನ ಬೆಂಬಲ ನೀಡಿದೆ.
ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಒಂದು ದಿನದ ನಂತರ, ಚಂದ್ರಬಾಬು ನಾಯ್ಡು ಅವರನ್ನು ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ; ಚಂದ್ರಬಾಬು ನಾಯ್ಡು ಬಂಧನ : ಬೆಂಬಲಿಸಲು ಹೊರಟಿದ್ದ ಪವನ್ ಕಲ್ಯಾಣ್ ಖಾಕಿ ವಶಕ್ಕೆ
ಬಂದ್‌ನಲ್ಲಿ ಪಕ್ಷದ ಕಾರ್ಯಕರ್ತರು, ಜನರು ಮತ್ತು ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಟಿಡಿಪಿ ರಾಜ್ಯಾಧ್ಯಕ್ಷ ಕೆ ಅಚ್ಚನ್ನಾಯ್ಡು ತಮ್ಮ ಹೇಳಿಕೆಯಲ್ಲಿ ವಿನಂತಿಸಿದ್ದಾರೆ. ಬಹುಕೋಟಿ ಭ್ರಷ್ಟಾಚಾರ ಹಗರಣದಲ್ಲಿ ವಿಜಯವಾಡದ ಸ್ಥಳೀಯ ನ್ಯಾಯಾಲಯ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೌಶಲಾಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ₹ 300 ಕೋಟಿ ನಷ್ಟವಾಗಿದೆ ಎಂದು ಆಂಧ್ರಪ್ರದೇಶ ಸಿಐಡಿ ಮುಖ್ಯಸ್ಥ ಎನ್ ಸಂಜಯ್ ಶನಿವಾರ ತಿಳಿಸಿದ್ದಾರೆ.
ಇದನ್ನೂ ಓದಿ; ಚಂದ್ರಬಾಬು ನಾಯ್ಡು 14 ದಿನ ನ್ಯಾಯಾಂಗ ಬಂಧನಕ್ಕೆ
ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ಆಡಳಿತ ಪಕ್ಷ ವೈಎಸ್ಆರ್ ಕಾಂಗ್ರೆಸ್ ಪಕ್ಷವು “ಸಮಾಜ ವಿರೋಧಿ ಚಟುವಟಿಕೆಗಳನ್ನು” ಆಶ್ರಯಿಸುತ್ತಿದೆ. ರಾಜ್ಯದಲ್ಲಿ ವೈಎಸ್ಆರ್‌ಸಿಪಿ ಸರ್ಕಾರ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ನಂತರ ಚಂದ್ರಬಾಬು ನಾಯ್ಡು ಅವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳ ಬಂಧನಕ್ಕೂ ಮುನ್ನ ಜೈಲಿನಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಪೊಲೀಸ್ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥರನ್ನು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಟಿಡಿಪಿ ಕಾರ್ಯಕರ್ತರು ವಿಜಯವಾಡ ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿದರು. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜಮಂಡ್ರಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.