Sunday, September 24, 2023
spot_img
- Advertisement -spot_img

ಚಂದ್ರಯಾನ ಭಾರತದ ಹೆಮ್ಮೆಯ ಕ್ಷಣ : ಪ್ರಕಾಶ್​ ರಾಜ್

ಬೆಂಗಳೂರು : ಕೆಲ ದಿನಗಳ ಹಿಂದೆ ಚಂದ್ರಯಾನ-3ರ ಕುರಿತು ವ್ಯಂಗ್ಯವಾಗಿ ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದ ನಟ ಪ್ರಕಾಶ್ ರಾಜ್ ಇಂದು ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಬೆನ್ನಲ್ಲೇ ಟ್ವೀಟ್ ಮಾಡಿದ ಪ್ರಕಾಶ್ ರಾಜ್, ‘ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು. ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ.. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು , ಇದು ದಾರಿಯಾಗಲಿ’ ಎಂದು ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಇಸ್ರೋ ಮಾಜಿ ಮುಖ್ಯಸ್ಥ ಕೆ. ಶಿವನ್ ಅವರ ಫೋಟೋವನ್ನು ವ್ಯಕ್ತಿಯೊಬ್ಬ ಚಹಾ ತಯಾರಿಸುವ ರೀತಿಯಲ್ಲಿ ವ್ಯಂಗ್ಯವಾಗಿ ಚಿತ್ರಿಸಿ ಪೋಸ್ಟ್ ಮಾಡಿದ್ದರು. ‘ತಾಜಾ ಸುದ್ದಿ , ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದ್ರಶ್ಯ’ ಎಂದು ಈ ಫೋಟೋ ಜೊತೆಗೆ ಬರೆದುಕೊಂಡಿದ್ದರು. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಲವೆಡೆ ಪ್ರಕರಣ ಕೂಡ ದಾಖಲಾಗಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles