ಬೆಂಗಳೂರು: ʼಇಸ್ರೋʼದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಸ್ರೋಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರನ್ನು ಬೆಂಗಳೂರಿನಲ್ಲಿ ಖುದ್ದು ಭೇಟಿಯಾಗಿ ಸನ್ಮಾನಿಸಿದರು.
ಇಸ್ರೋ ವಿಜ್ಞಾನಿಗಳ ತಂಡವು ಈ ದಿನದ ಚಂದ್ರಯಾನ ಒಟ್ಟಾರೆ ಕಾರ್ಯಾಚರಣೆಯನ್ನು ಬೆಂಗಳೂರಿನಿಂದಲೇ ನಿರ್ವಹಿಸಿದರು. ಹಾಗಾಗಿ, ಡಿ.ಕೆ.ಶಿವಕುಮಾರ್ ಅವರು ಇಸ್ರೋ ವಿಜ್ಞಾನಿಗಳ ತಂಡವನ್ನು ಭೇಟಿಯಾಗಿ, ಎಲ್ಲರನ್ನೂ ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ ಎಂದು ಶ್ಲಾಘಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.