ಬೆಂಗಳೂರು : ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬಿಜೆಪಿ ಶಾಸಕರು, ಮಾಜಿ ಸಚಿವರು ಹಾಗೂ ಕಾರ್ಯಕರ್ತರು ಮುಖಂಡರು ಆಗಮಿಸುವ ಮೂಲಕ ನೂತನ ಸಾರಥಿಗೆ ಶುಭಕೋರಿದ್ದಾರೆ.
ಈ ಕಾರ್ಯಕ್ರಮಕ್ಕೆ ಯಾರೆಲ್ಲ ಆಗಮಿಸಿದ್ದರು, ಏನೇನಾಯ್ತು? ವಿಜಯೇಂದ್ರ ಪಟ್ಟಾಭಿಷೇಕದ ಫೋಟೊ ಝಲಕ್ ಇಲ್ಲಿದೆ ನೋಡಿ..


ಬಿಜೆಪಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ವಿಜಯೇಂದ್ರ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.


ಪದಗ್ರಹಣಕ್ಕೂ ಮುನ್ನ ಮಗ ಬಿ.ವೈ ವಿಜಯೇಂದ್ರ ಅವರಿಗೆ ತಂದೆ ಯಡಿಯೂರಪ್ಪ ಅವರು ತಲೆಯ ಮೇಲೆ ಕೈ ಇಟ್ಟು ಆಶೀರ್ವಾದ ಮಾಡುವ ಮೂಲಕ ಶುಭ ಹಾರೈಸಿದರು. ಪಕ್ಕದಲ್ಲಿ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಪಕ್ಷದ ಹಲವು ನಾಯಕರು ಇದ್ದಾರೆ.


ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.


ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಪುಸ್ತಕವನ್ನು ಉಡಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸಿದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಇತರ ಗಣ್ಯರು.


ನೂತನವಾಗಿ ಅಧಿಕಾರ ಪಡೆದ ಬಿ.ವೈ.ವಿಜಯೇಂದ್ರ ಅವರು ಕಾರ್ಯಕರ್ತರ ಮೊದಲ ಪತ್ರಕ್ಕೆ ಸಹಿ ಹಾಕುತ್ತಿರುವುದು.


ಕಾರ್ಯಕ್ರಮಕ್ಕೂ ಮುನ್ನ ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ನಾಯಕರು ಹೋಮ ಹಾಗೂ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.


ನೂತನ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಸಿಹಿ ತಿನ್ನಿಸಿ ಸಂಭ್ರಮ ಹಂಚಿಕೊಂಡರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.