ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೂತನ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದು, ನಟ ಚೇತನ್ ಅಭಿನಂದನೆ ಸಲ್ಲಿಸಿದ್ದಾರೆ, ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿದ್ದಾರೆ.
1.ಎಲ್ಲಾ 5 ಚುನಾವಣಾ ಯೋಜನೆಗಳನ್ನು ಜಾರಿಗೊಳಿಸಬೇಕು.2.ಗೋಹತ್ಯೆ ವಿರೋಧಿ ಮಸೂದೆ & ಮತಾಂತರ ವಿರೋಧಿ ಮಸೂದೆಯನ್ನು ತೆಗೆದು ಹಾಕಬೇಕು.3.ಶೇ.4 ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು
4.ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು/ಹೊರಗೆ ತರಬೇಕು, 5.ಎಸ್ಟಿ (ST) ಒಳಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು. ಸಿದ್ದರಾಮಯ್ಯ ಮೊದಲ ಸಂಪುಟ ಸಭೆಯಲ್ಲಿಯೇ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇಂದು ಕೆಲವು ಬೇಡಿಕೆಗಳನ್ನು ಇರಿಸಿದ್ದ ಚೇತನ್, ಸಿದ್ದರಾಮಯ್ಯ ಜೊತೆಯಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.