ಬೆಂಗಳೂರು: ನಟ ಚೇತನ್ ಉರಿಗೌಡ , ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹಾಕಿರುವ ಎಫ್ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು.
1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.ಈ ಪೋಸ್ಟ್ ನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಈಗ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.