ಬೆಂಗಳೂರು: ಗಾಂಜಾ ಕೃಷಿಯನ್ನು ಕಾನೂನು ಬದ್ಧಗೊಳಿಸುವಂತೆ ನಟ, ಸಾಮಾಜಿಕ ಹೋರಾಟಗಾರ, ಚೇತನ್ ಕುಮಾರ್ ಒತ್ತಾಯಿಸಿದ್ದಾರೆ.
ಗಾಂಜಾ ಕೃಷಿ ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸಲಿದೆ, ರೋಗಿಗಳಿಗೆ ಔಷಧೀಯ ಪ್ರಯೋಜನ ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ. ಉತ್ತರಾಖಂಡ, ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಕರ್ನಾಟಕವೂ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು’ ಎಂದು ಫೇಸ್ ಬುಕ್ ನಲ್ಲಿ ಚೇತನ್ ಪೋಸ್ಟ್ ಹಾಕಿದ್ದಾರೆ.
ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸುಖು ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಲು ಯೋಜಿಸಿರುವುದನ್ನು ಚೇತನ್ ಬೆಂಬಲಿಸಿದ್ದಾರೆ. ಇದು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಎನ್ನುವ ಕುರಿತು ಅಧ್ಯಯನವಾಗಲಿ ಎಂದು ಹೇಳಿದ್ದಾರೆ.
ಈ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಗಾಂಜಾ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಮತ್ತೆ ಚೇತನ್ ಆ ಕುರಿತು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.