ಮೈಸೂರು : ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್ ನವರು ನಷ್ಟ ಎನ್ನುತ್ತಿದ್ದಾರೆ. ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ಬಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಯಾವುದೇ ತೊಂದರೆಯಾಗದೆ ಶಾಂತಯುತವಾಗಿ ಪ್ರತಿಭಟನೆ ಮಾಡಲಿ ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಖಾಸಗಿ ಸಾರಿಗೆ ಒಕ್ಕೂಟಗಳಿಂದ ನಡೆಸಲಾಗುತ್ತಿರುವ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಹೋರಾಟ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಬಂದ್ ವೇಳೆ ಕಾನೂನು ಕೈಗೆತ್ತಿಕೊಂಡ್ರೆ ಕಠಿಣ ಕ್ರಮ : ಗೃಹ ಸಚಿವರ ಎಚ್ಚರಿಕೆ
ಕೆಲವು ಪ್ರಕರಣಗಳು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಲ್ಲಿದ್ದು, ಅವುಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು, ಆದರೆ, ಶಕ್ತಿ ಯೋಜನೆಯಿಂದ ಆಗುವ ನಷ್ಟವನ್ನು ಪ್ರಾಯೋಗಿಕವಾಗಿ ಭರಿಸಲು ಸಾಧ್ಯವಿಲ್ಲ ಎಂದರು.
‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದೆ. ಆಟೋ, ಕ್ಯಾಬ್, ಸೇರಿದಂತೆ ಸಾವಿರಾರು ಖಾಸಗಿ ವಾಹನಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಕೆಲವೆಡೆ ಪ್ರಯಾಣಿಕರು ಪರದಾಡುವಂತಾಗಿದೆ.
ಇದನ್ನೂ ಓದಿ : ಉಚಿತ ‘ಗ್ಯಾರಂಟಿ’ಗಳಿಂದ ತೊಂದರೆ ಆಗದಿರಲಿ – ಪ್ರಲ್ಹಾದ್ ಜೋಶಿ
ಕಳೆದ ನಾಲ್ಕು ವರ್ಷಗಳಿಂದಲೂ ಸಾರಿಗೆ ಸಂಸ್ಥೆಗಳ ಬೇಡಿಕೆಗಳಿವೆ. ಕಾಂಗ್ರೆಸ್ ಸರ್ಕಾರ ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಜಾರಿಗೆ ತಂದಿದೆ. ಖಾಸಗಿಯವರ ಬೇಡಿಕೆ ಈಡೇರಿಕೆ ಸಂಬಂಧ ಯಾರೋ ಅಧಿಕಾರಿ ಏನೋ ಹೇಳಿದ್ದಾರೆ ಎಂದು ಸಿಎಂ ಜೊತೆಗಿನ ಸಭೆಯಲ್ಲಿ ಒಕ್ಕೂಟದ ಪ್ರತಿನಿಧಿಗಳು ಭಾಗವಹಿಸಲಿಲ್ಲ. ಕಾನಾನೂತ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.