ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿನಿಂದ ಮೂರು ದಿನಗಳ ಕಾಲ ತಮ್ಮ ತವರು ಜಿಲ್ಲೆ ಮೈಸೂರಿಗೆ ತೆರಳಲಿದ್ದಾರೆ. ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಗೃಹಲಕ್ಷ್ಮೀ ಯೋಜನೆಯ ಜಾರಿಗಾಗಿ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ರಾತ್ರಿ 8 ಗಂಟೆಗೆ ಮೈಸೂರಿಗೆ ತೆರಳಲಿದ್ದಾರೆ. ನಾಳೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ : ‘ಜಾತ್ಯಾತೀತ ಎಂದು ಹೇಳಿಕೊಳ್ಳುವ ಕೆಸಿಆರ್ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ’
ಗೃಹಲಕ್ಷ್ಮೀ ಯೋಜನೆಯು ಅತೀ ಹೆಚ್ಚು ಫಲಾನುಭವಿಗಳನ್ನು ಹೊಂದಿದೆ ಹಾಗೂ ಬಹುದೊಡ್ಡ ವೆಚ್ಚದ ಯೋಜನೆ ಇದಾಗಿದೆ. ಸಿಎಂ ತವರು ಜಿಲ್ಲೆಯಲ್ಲೆ ಈ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಅವರೇ ಮುತುವರ್ಜಿಯಿಂದ ಮೇಲ್ವಿಚಾರಣೆ ನಡೆಸಲಿದ್ದಾರೆ.
ಈಗಾಗಲೇ ಕಾರ್ಯಕ್ರಮದ ಸಿದ್ದತೆಯ ಹೊಣೆಯನ್ನು ಹೊತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರೂಪುರೇಷೆಗಳನ್ನು ತಯಾರಿಸುವ ಕಾರ್ಯದಲ್ಲಿ ಮೈಸೂರಿನಲ್ಲೆ ಠಿಕಾಣಿ ಹೂಡಿದ್ದಾರೆ. ಅಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹ ಕಾರ್ಯಕ್ರಮದ ಸಿದ್ದತೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಆಗಸ್ಟ್ 30ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.