ನವದೆಹಲಿ : ಗಡಿ ವಿಚಾರದಲ್ಲಿ ಚೀನಾ ಮತ್ತೆ ಕ್ಯಾತೆ ತೆಗೆದಿದ್ದು, ಭಾರತದ ಅರುಣಾಚಲ ಪ್ರದೇಶ ರಾಜ್ಯವನ್ನು ಸೇರಿಸಿ ತನ್ನ ನಕ್ಷೆ ಬಿಡುಗಡೆ ಮಾಡಿದೆ.
ಚೀನಾ ಬಿಡುಗಡೆ ಮಾಡಿರುವ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶದ ಅಕ್ಷಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಪ್ರದೇಶ ಒಳಗೊಂಡಿದೆ. ಇದು ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ಏರ್ಪಟ್ಟ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದೆಗೆಟ್ಟಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು.
ಇದನ್ನೂ ಓದಿ : ಜಾಗತಿಕ ನಾಯಕರು ಭಾರತಕ್ಕೆ ಬರುವಾಗ ವಿದೇಶಕ್ಕೆ ಹೊರಟ ರಾಹುಲ್
ಉಭಯ ನಾಯಕರ ಸಭೆಯಲ್ಲಿ ಗಡಿ ವಿವಾದ ಶಮನಕ್ಕೆ ಒಪ್ಪಿಗೆ ಸೂಚಿಸಿದ್ದರು. ಈ ಬೆನ್ನಲ್ಲೇ ಇದೀಗ ಚೀನಾ ಸರ್ಕಾರ ಭಾರತದ ಭೂ ಪ್ರದೇಶಗಳನ್ನು ಸೇರಿಸಿ ನಕ್ಷೆ ಬಿಡುಗಡೆ ಮಾಡುವ ಮೂಲಕ ತನ್ನ ನರಿ ಬುದ್ದಿಯನ್ನು ತೋರಿಸಿದೆ. ಇದಕ್ಕೆ ಭಾರತ ಸರ್ಕಾರ ಯಾವ ರೀತಿ ಉತ್ತರ ನೀಡಲಿದೆ ಎಂಬುವುದನ್ನು ಕಾದು ನೋಡಬೇಕಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.