ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತಕ್ಕೀಡಾಗಿದ್ದು, ಚಿಂಚನಸೂರು ಅವರಿಗೆ ಪೆಟ್ಟಾಗಿದೆ, ಚಿಂಚನಸೂರ್ ಜೊತೆಯಲ್ಲಿದ್ದ ಗನ್ ಮ್ಯಾನ್ ಮತ್ತು ಚಾಲಕರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಂಚನಸೂರು ಗುರು ಮಿಠಕಲ್ ಕ್ಷೇತ್ರದ ಕೈ ಅಭ್ಯರ್ಥಿಯಾಗಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ.ಚುನಾವಣಾ ಪ್ರಚಾರ ಮುಗಿಸಿ ಯಾದಗಿರಿಯಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಅಂದಹಾಗೆ ಬಾಬುರಾವ್ ಚಿಂಚನಸೂರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ. ಕಾರ್ ನಲ್ಲಿ 2 ಚಾಲಕರು, ಒಬ್ ಗನ್ ಮ್ಯಾನ್ ಸೇರಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು.