ಬೆಂಗಳೂರು: ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿ, ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣ, ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ಫೇಕ್ ಕೇಸ್, ರವಿ ಪತ್ನಿ ದಾಖಲಿಸಿದ್ದ ಪ್ರಕರಣಸ ವರ್ಗಾವಣೆ ಮತ್ತು ವೇಶ್ಯಾವಾಟಿಕೆ ದಂಧೆ ಪ್ರಕರಣಗಳೂ ಸೇರಿದಂತೆ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸ್ಯಾಂಟ್ರೋ ರವಿ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸುವಂತೆ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಡಿಜಿ & ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಷ್ಟರಲ್ಲಿ ಕೇಸ್ ಸಿಐಡಿಗೆ ಅಧಿಕೃತವಾಗಿ ವರ್ಗಾವಣೆ ಆಗಲಿದೆ.
ಗುಜರಾತ್‌ನಲ್ಲಿ ಬಂಧಿಸಲಾದ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಶನಿವಾರ ರಾತ್ರಿ ವಾಲ್ಮೀಕಿ ರಸ್ತೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಆಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು. ಸೋಮವಾರ ಅಂದರೆ ಇಂದು ಕೋರ್ಟ್‌ಗೆ ಪುನಃ ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲಾಯಿತು. ಆದರೆ ಪೊಲೀಸರ ವಶಕ್ಕೆ ನೀಡಿದ ಕೋರ್ಟ್ ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಿತು.