Tuesday, March 28, 2023
spot_img
- Advertisement -spot_img

ಫೆಬ್ರವರಿ ತಿಂಗಳಲ್ಲಿ ಮತ್ತೊಂದು ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಹಾವೇರಿ: ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಬಿಜೆಪಿ ಸರ್ಕಾರ ಮತ್ತೊಂದು ಬಜೆಟ್‌ ಮಂಡನೆಗೆ ಚಿಂತನೆ ನಡೆಸುತ್ತಿದೆ. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಶಿಗ್ಗಾಂವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್‌ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನು ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಐಎಲ್‌ಐ ಮತ್ತು ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್‌ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್‌ಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿಕೊಳ್ಳುವುದು. ಮಾಸ್ಕ್‌ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್‌ಪೋರ್ಟ್, ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೊನಾದಿಂದ ತೊಡಕುಂಟಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

Related Articles

- Advertisement -

Latest Articles