Sunday, March 26, 2023
spot_img
- Advertisement -spot_img

ರಾಜ್ಯದ ನಾಲ್ಕು ಕಡೆ ರಥಯಾತ್ರೆ ನಡೆಸಲು ನಿರ್ಧಾರ : ಸಿಎಂ ಬೊಮ್ಮಾಯಿ

ನವದೆಹಲಿ: ರಥಯಾತ್ರೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಆದರೆ, ಹೇಗೆ ಮತ್ತು ಯಾ ರೀತಿ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಇನ್ನಷ್ಟೇ ತೀರ್ಮಾನಕ್ಕೆ ಬರಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರ ಜತೆ ಮಾತನಾಡಿ,ಬಿಜೆಪಿ ಕಾರ್ಯಕಾರಿಣಿಯ ಮೊದಲ ದಿನ ಹಲವಾರು ರಾಜಕೀಯ ನಿರ್ಣಯ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯಲಿರುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಕರ್ನಾಟಕದಲ್ಲಿ ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು ಯಾವ ರೀತಿ ಪಕ್ಷ ಸಂಘಟನೆ ಕಾರ್ಯ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ನೀಡಿದೆ ಎಂದು ತಿಳಿಸಿದ್ದಾರೆ.

ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದು ಹೇಳಿದರು. ’ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇವೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರೂ ಪರಿಣಾಮ ಬೀರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿರುವ ಜನಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು. ಬಸನಗೌಡ ಪಾಟೀಲ ಯತ್ನಾಳ್ ಪಕ್ಷದಿಂದ ನೋಟಿಸ್ ನೀಡಲಾಗಿದೆ ಎಂಬ ವರದಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷದ ಅಧ್ಯಕ್ಷರು ಈ ಹಿಂದೆಯೂ ವರದಿ ಕಳುಹಿಸಿದ್ದರು. ಕಾರ್ಯಕಾರಿಣಿ ಮುಗಿದ ಬಳಿಕ ಈ ವಿಚಾರದ ಬಗ್ಗೆ ರಾಜ್ಯ ಬಿಜೆಪಿ ಕೂಡ ವಿಚಾರಣೆ ಮಾಡಲಿದೆ ಎಂದಿದ್ದಾರೆ.

Related Articles

- Advertisement -

Latest Articles