ಹಾವೇರಿ: ಯಾವುದೇ ಕಾರಣಕ್ಕೂ ಶಿಗ್ಗಾಂವಿ ಬಿಡೋದಿಲ್ಲ”ಯಾವನು ಹೇಳಿದ್ದು?” ಎಂದು ಸಿಎಂ ಬಸವರಾಜ ಬೊಮ್ಮಾಯಿ ಗರಂ ಆದರು.
ಮಾಧ್ಯಮದವರೊಂದಿಗೆ ಮಾತನಾಡಿ, ಶಿಗ್ಗಾಂವಿ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ರಂಗದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿವೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಮಾಡಿದ್ದೇನೆ. ಹೀಗಾಗಿ ಇಲ್ಲಿಂದಲೇ ನನ್ನ ಸ್ಪರ್ಧೆ ಎಂದು ಸ್ಪಷ್ಟಪಡಿಸಿದರು.
ಶಿಗ್ಗಾಂವಿ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಸಿಎಂ ಪೂರ್ಣವಿರಾಮ ಇಟ್ಟಿದ್ದಾರೆ. ಇದೇ ವೇಳೆ, ಶೀಘ್ರದಲ್ಲಿಯೇ ಹಾವೇರಿ ಮೆಡಿಕಲ್ ಕಾಲೇಜ್ ಉದ್ಘಾಟಿಸಲಾಗುವುದು ಎಂದರು. ಇನ್ನೂ ಬೊಮ್ಮಾಯಿ ಎದುರಾಳಿಯಾಗಿ ವಿನಯ್ ಕುಲಕರ್ಣಿಯನ್ನು ಅಖಾಡಕ್ಕಿಳಿಸಲು ಕಾಂಗ್ರೆಸ್ ಹಲವಾರು ಆಯಾಮಗಳಿಂದ ಯೋಚಿಸುತ್ತಿದೆ.
ಶಿಗ್ಗಾಂವಿಯಲ್ಲಿ ಪಂಚಮಸಾಲಿ ಸಮುದಾಯದವರೇ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. 2ಎ ಮೀಸಲಿಗೆ ಸ್ಪಂದನೆ ಸಿಗದ ಕಾರಣ ವಿನಯ್ ಕುಲಕರ್ಣಿಯವರನ್ನು ಶಿಗ್ಗಾಂವಿಯಿಂದ ಕಣಕ್ಕಿಳಿಸಲು ಕೈ ಪಕ್ಷ ಯೋಚಿಸುತ್ತಿದೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನ್ನ ನಿರ್ಧಾರವಲ್ಲ. ಸಿಎಂ ವಿರುದ್ಧ ಸ್ಪರ್ಧೆ ಮಾಡಬೇಕೆಂಬುದು ಹೈಕಮಾಂಡ್ ನಿರ್ಧಾರ ಎಂದು ವಿನಯ್ ಕುಲಕರ್ಣಿ ಹೇಳಿದ್ದರು.