Tuesday, March 28, 2023
spot_img
- Advertisement -spot_img

ಖಾಯಂಗೊಳಿಸಿದ್ದಕ್ಕೆ ಸಿಎಂ ಬೊಮ್ಮಾಯಿಯವರನ್ನು ಅಭಿನಂದಿಸಿದ ಪೌರ ಕಾರ್ಮಿಕರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಡಗರದ ವಾತಾವರಣ ನಿರ್ಮಾಣವಾಗಿತ್ತು. ಪೌರಕಾರ್ಮಿಕರನ್ನು ಖಾಯಂಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪೌರಕಾರ್ಮಿಕರು ಕೃತಜ್ಞತೆಯನ್ನು ಸಲ್ಲಿಸಿದ್ರು.

ಬೊಮ್ಮಾಯಿಯವರನ್ನು ನೋಡುತ್ತಿದ್ದಂತೆ ತಮ್ಮ ಹರ್ಷ ವ್ಯಕ್ತಪಡಿಸಿದ ಪೌರಕಾರ್ಮಿಕರು, ಮುಖ್ಯಮಂತ್ರಿಯನ್ನು ಸುತ್ತುವರಿದು, ಶಾಲು, ಹಾರ, ಫಲ ತಾಂಬೂಲ ಅರ್ಪಿಸಿ ತಮ್ಮ ನೌಕರಿಯನ್ನು ಖಾಯಂಗೊಳಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು. ಪೌರಕಾರ್ಮಿಕರ ಕುಶಲೋಪರಿ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರು ನಿಮ್ಮ ಆರೋಗ್ಯ, ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಕಾಳಜಿ ವಹಿಸಲಿದೆ ಎಂದು ಭರವಸೆ ನೀಡಿದ್ರು. ಆ ಬಳಿಕ ಮುಖ್ಯಮಂತ್ರಿಗಳು ಪೌರ ಕಾರ್ಮಿಕರ ಜೊತೆಯಲ್ಲಿಯೇ ಉಪಹಾರಕ್ಕೆ ಕುಳಿತುಕೊಂಡರು. ಈ ವೇಳೆ ತಮ್ಮ ಪಕ್ಕ ಕುಳಿತ ಭಾರತಿ ಅವರೊಂದಿಗೆ ಮಾತನಾಡಿಸಿ ಅವರ ವೇತನ ಸರಿಯಾಗಿ ಆಗುತ್ತಿದೆಯೇ, ಕೆಲಸದ ಸ್ಥಳದಲ್ಲಿ ಸೂಕ್ತ ಸೌಲಭ್ಯಗಳು ದೊರೆಯುತ್ತಿವೆಯೇ, ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ಪಡೆದರು.

ಪೌರ ಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಆತ್ಮ ಗೌರವ ಮೂಡಿಸುವ ಕೆಲಸ ಮಾಡುವುದಾಗಿ ತಿಳಿಸಿದರು. ಇಷ್ಟು ವರ್ಷದ ನಮ್ಮ ಕಠಿಣ ಪರಿಶ್ರಮಕ್ಕೆ ನ್ಯಾಯ ಸಿಕ್ಕಿರುವ ಭಾವನೆ ಇದೆ. ಮಾನವೀಯತೆಯಿಂದ ಅವರ ಭಾವನೆಗಳಿಗೆ ಗೌರವ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಿಎಂ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್‌, ಕೋಟ ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

Related Articles

- Advertisement -

Latest Articles