ಹುಬ್ಬಳ್ಳಿ: ನಾಡು ಹಿಂದೆ ಎಂದಿಗೂ ಕಾಣದಷ್ಟು ಅಭಿವೃದ್ಧಿ ಕಾಣಲಿ. ನಾಡಿನ ಸರ್ವ ಜನತೆಗೆ ಹೊಸ ವರ್ಷ ಸಂತೋಷ ತರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಅಂತ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ, ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರು ಹೋರಾಟ ಮಾಡಿದ್ರು, ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತಿದೆ ಎಂದು ತಿಳಿಸಿದರು.
ಟೀಕೆ ಟಿಪ್ಪಣಿಗಳ ಬಗ್ಗೆ ನಾನು ತಲೆಕಡೆಸಿಕೊಳ್ಳುವುದಿಲ್ಲ. ಡಿಪಿಆರ್ ಆಗಿದೆ- ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಅಂತ ಹೇಳಿದ್ದಾರೆ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ. ಈಗ ನಾವು ಮಾಡುತ್ತಿರೋದ್ರಿಂದ ಸಮಸ್ಯೆಯಾಗಿದೆ ಅಂತ ಹರಿಹಾಯ್ದಿದ್ದಾರೆ.