ಹಾವೇರಿ : ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಕನ್ನಡನಾಡಿನ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಎರಡು ದಿನಗಳಿಂದ ಹಾವೇರಿ ಜಿಲ್ಲೆಯಿಂದ ರಾಜ್ಯದೆಲ್ಲೆಡೆ ಸಾಹಿತ್ಯದ ಕಂಪು ಹರಡುತ್ತಿದೆ,ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹಾಗೂ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು.
ಸಾಹಿತಿಗಳು ನೀಡಿರುವ ಹೇಳಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಇದೇ ವೇಳೆ ತಿಳಿಸಿದರು. ಕಾಂಗ್ರೆಸ್ ಎಸ್ಸಿಎಸ್ಟಿ ಸಮಾವೇಶದ ಬಗ್ಗೆ ಮಾತನಾಡಿ , ನಾವು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿ ಬಹಳ ದಿನಗಳಾಗಿವೆ. ಈ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಎಸ್ಸಿ ಎಸ್ಟಿ ಜನಾಂಗಕ್ಕೆ ಯಾರೆಲ್ಲಾ ಯಾವ ಕಾರ್ಯಕ್ರಮ ಕೊಟ್ಟಿದ್ದಾರೆ. ಎಷ್ಟು ಅನುಷ್ಠಾನವಾಗಿದೆ. ಎಸ್ಸಿ ಎಸ್ಟಿ ಜನಾಂಗದವರ ಬದುಕು ಎಷ್ಟು ಉತ್ತಮವಾಗಿದೆ ಎಂಬುದು ಗೊತ್ತಿದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎಲ್ಲರೂ ಈಗ ಜಾಗೃತರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟವಾಗಲಿದೆ. ಈಗಾಗಲೇ ನಾವು ಸಹ ರಥಯಾತ್ರೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ತಿಳಿಸಿದರು. ಕನ್ನಡಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲೇ ಹುಟ್ಟಿಲ್ಲ. ಹುಟ್ಟುವುದೂ ಇಲ್ಲಾ ಎಂದು ಖಡಕ್ಕಾಗಿ ಹೇಳಿದ್ದಾರೆ.