ಮಂಡ್ಯ : ಪ್ರಸುತ್ತ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಗುಜರಾತ್ ನಂತಯೇ ರಾಜ್ಯದಲ್ಲಿ ಫಲಿತಾಂಶ ಬರಲಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು, ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ತಮ್ಮ ಮತಬ್ಯಾಂಕ್ ಹೆಚ್ಚಿಸಲು ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ ಮತ್ತು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ಹೇಳಿದರು.
”ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡುತ್ತಿದ್ದರೆ, ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟವನ್ನು ಶಿವಕುಮಾರ್ ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿದ್ದು ಬಿಟ್ಟರೆ ಅವರಿಗೆ ಬೇರೆ ವಿಚಾರಗಳು ಸಿಗುತ್ತಿಲ್ಲ ಎಂದರು.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಅಲೆ ಕಾಣುತ್ತಿದ್ದು, ಮಂಡ್ಯ ಭಾಗದಲ್ಲಿ ಪಕ್ಷ ಬಲವಾಗಿ ಬೆಳೆಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಮಂಡ್ಯದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.