Monday, March 20, 2023
spot_img
- Advertisement -spot_img

ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ :ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಲಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ,ಕೆಲವು ಹಿಂದುಳಿದ ವರ್ಗಗಳಿಗೆ ಅನೇಕ ವರ್ಷಗಳಿಂದ ಶಿಕ್ಷಣ‌ ಮತ್ತು ಉದ್ಯೋಗದಲ್ಲಿ ಹಿನ್ನಡೆಯಾಗಿತ್ತು. ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮೀಸಲಾತಿ ಘೋಷಣೆ ಮಾಡಿದ್ದೇವೆ. ಈಗಿರುವ ಹಿಂದುಳಿದ ವರ್ಗಗಳ ಮೀಸಲಾತಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತೇವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದನ್ನು ಮಾಡಲು ಸಾಧ್ಯವಾಗಿಲ್ಲ. ನಾವು ಮಾಡಿದ್ದಕ್ಕೆ ಅವರಿಗೆ ಸಮಸ್ಯೆಯಾಗಿದೆ’ ಎಂದರು.

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸುತ್ತೇವೆ ಎಂದು ಹೇಳಿದರು.

ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ, ಯಾರಿಗೂ ಅನ್ಯಾಯ ಮಾಡಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಲಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದುರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್​ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಹೇಳಿದರು.ಕಾಂಗ್ರೆಸ್​ ನಾಯಕರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಎಂಒಎಫ್ ಕ್ಲಿಯರೆನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದು ಮಾಹಿತಿ ಕೊಟ್ಟರು.

Related Articles

- Advertisement -

Latest Articles