Tuesday, March 28, 2023
spot_img
- Advertisement -spot_img

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭಾಷಣ ತಿರುಚಿದ ಕಿಡಿಗೇಡಿಗಳು : ದೂರು ಸಲ್ಲಿಕೆ

ತುಮಕೂರು: ಜನಸಂಕಲ್ಪ ಯಾತ್ರೆ ಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭಾಷಣ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ಪವನ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಭಾಷಣದ ವೇಳೆ, ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್​ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ‘ಪರಮೇಶ್ವರ್​ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ’ ಎಂದು ಹೇಳಿರುವುದಾಗಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪವನ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ‘ಸಾರ್ವಜನಿಕ ಸೇವಾ ಬಳಗ’ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.‌ಜಿ.ಪರಮೇಶ್ವರ್ ಕೊರಟಗೆರೆ ಎಂಬ ಫೇಸ್​ಬುಕ್ ಪೇಜ್​ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಹೀಗಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related Articles

- Advertisement -

Latest Articles