ಹುಬ್ಬಳ್ಳಿ: ಪ್ರಿಯಾಂಕ ಗಾಂಧಿ ಅವರ ನಾ ನಾಯಕಿ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಅವರಿಗೆ ಬಂದಿದೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ’ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರದ್ದು ಯಥಾ ಬುದ್ಧಿ, ತಥಾ ಮಾತುಗಳು. ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್ ವಿನಾಶದ ಕನಸುಗಳು ಬೀಳುತ್ತಿವೆ. ಎಲ್ಲದರಲ್ಲೂ ಅವರು ವಿನಾಶವನ್ನೇ ನೋಡುತ್ತಿದ್ದಾರೆ , ಕಾಂಗ್ರೆಸ್ ನವರಿಗೆ ಅಧಿಕಾರ ಸಿಕ್ಕರೆ ತಾನೇ ಪ್ರತ್ಯೇಕ ಮಹಿಳಾ ಬಜೆಟ್ ಘೋಷಿಸಲು ಸಾಧ್ಯ ಎಂದು ಕುಟುಕಿದರು.
ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಲಾಗುತ್ತಿದೆ, ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ ಎಂದರು.